ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ…

ಬೆಂಗಳೂರು,ಮೇ,13,2021(www.justkannada.in):  ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.jk

ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ಕೊರೋನಾ 2ನೇ ಅಲೆ ಹೆಚ್ಚುತ್ತಿದ್ದು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

key words: Covid -SSLC- Exam- Postponement.