ಸೆಪ್ಟೆಂಬರ್ ನಲ್ಲಿ ಕೋವೊವ್ಯಾಕ್ಸ್ ಬಳಕೆಗೆ ಲಭ್ಯ: ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಪೂನವಾಲಾ

ಬೆಂಗಳೂರು, ಮಾರ್ಚ್ 28, 2021 (www.justkannada.in): ಕೋವೊವ್ಯಾಕ್ಸ್ ಸಪ್ಟೆಂಬರ್ ನಲ್ಲಿ ಬಳಕೆಗೆ ಲಭ್ಯವಾಗಲಿದೆ ಎಂದು ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಆದರ್ ಪೂನವಾಲಾ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಪೂನವಾಲಾ, ಸೆಪ್ಟೆಂಬರ್ 2021 ರೊಳಗೆ ಲಸಿಕೆ ಬಿಡುಗಡೆ ಮಾಡುವ ಪ್ರಯತ್ನದಲ್ಲಿ ಇದ್ದೇವೆ. ಆ ಮುಖವಾಗಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.

ಕೋವಿಡ್ ನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಕೋವಿಡ್ ಲಸಿಕೆಗೆ ದೇಶದಲ್ಲಿ ಮತ್ತು ವಿದೇಶದಲ್ಲಿ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾ ಕೂಡ ಕಾರ್ಯನಿರತವಾಗಿದೆ ಎಂದು ಪೂನವಾಲಾ ತಿಳಿಸಿದ್ದಾರೆ.