ಬೆಂಗಳೂರು,ಡಿಸೆಂಬರ್,12,2020(www.justkannada.in) : ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕಕ್ಕೆ ಬುಧವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತ ಹಿನ್ನೆಲೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗೋ ಪೂಜೆ ಮಾಡುವ ಮೂಲಕ ವಿಧೇಯಕವನ್ನು ಸ್ವಾಗತಿಸಿದರು.
ಇಂದು ಮಲ್ಲೇಶ್ವರದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗೋ ಪೂಜೆ ನೆರವೇರಿಸಿ ಮಾತನಾಡಿದ ಸಚಿವರು, ಆಯಾ ಜಿಲ್ಲೆಗಳ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಪಕ್ಷದ ಕಚೇರಿಗಳಲ್ಲಿ ಗೋಪೂಜೆಗಳನ್ನು ಇಂದು ರಾಜ್ಯಾದ್ಯಂತ ನೆರವೇರಿಸುತ್ತಿದ್ದಾರೆ. ಇದೊಂದು ಐತಿಹಾಸಿಕ ನಿರ್ಣಯವಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ನವರದ್ದು ವಿರೋಧ ಮಾಡುವುದೇ ಕೆಲಸ. ಅವರು ವಿರೋಧ ಪಕ್ಷವಾಗಿರುವುದರಿಂದ ಪ್ರತಿ ಒಳ್ಳೆಯ ಕೆಲಸಕ್ಕೂ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಹೇಳಿದರು.

key words : Cow-slaughter-control-livestock-Conservation-Obedience-Historical-Determination-Minister-S.T.Somashekhar






