ನವದೆಹಲಿ,ಸೆಪ್ಟಂಬರ್,12,2025 (www.justkannada.in): ದೇಶದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ ಮಾಡಿದರು.
ರಾಷ್ಟ್ರಪತಿ ಭವನದಲ್ಲಿ ನಡೆದವಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ 15ನೇ ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಜೆ.ಪಿ ನಡ್ಡಾ ,ಹೆಚ್ ಡಿ ಕುಮಾರಸ್ವಾಮಿ, ನಿತಿನ್ ಗಡ್ಕರಿ, ಶೋಭಾ ಕರಂದ್ಲಾಜೆ, ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು. ವಿಪಕ್ಷ ನಾಯಕ ರಾಹುಲ್ ಗಾಂಧಿ ಗೈರಾಗಿದ್ದರು.
Key words: CP Radhakrishnan, sworn , new Vice President