ನಾನು ಯಡಿಯೂರಪ್ಪ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದಿದ್ದೇಕೆ ಯೋಗೇಶ್ವರ್!

ರಾಮನಗರ, ಜೂನ್ 06, 2021 (www.justkannada.in): ನಾನು ಸಿಎಂ ಯಡಿಯೂರಪ್ಪನವರ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜಕೀಯವಾಗಿ ಮಾತನಾಡುವುದಿಲ್ಲ, ಸಿಎಂ ಬಗ್ಗೆ ಮಾತಾಡಿದ್ರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದರು.

ಇಂದು ಮುಖ್ಯಮಂತ್ರಿ ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ, ನಿಮ್ಮ ಮೂಲಕ ಕೇಳುತ್ತಿದ್ದೇನೆ, ನನಗೆ ಆ ಬಗ್ಗೆ ಸ್ಪಷ್ಟತೆ ಇಲ್ಲ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಶಕ್ತಿಮೀರಿ ಕೆಲಸ ಮಾಡುತ್ತಿದ್ದಾರೆ, ಕೋವಿಡ್-19 ನಿರ್ವಹಣೆಯನ್ನು ಚೆನ್ನಾಗಿ ನಿಭಾಯಿಸುತ್ತಿದ್ದಾರೆ ಎಂದಿದ್ದಾರೆ.