ಮಂಡ್ಯ,ಸೆಪ್ಟಂಬರ್,12,2025 (www.justkannada.in): ಮದ್ದೂರಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದು, ಗಲಾಟೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ . ಕರ್ತವ್ಯ ಲೋಪದಡಿ ಮದ್ದೂರು ಟೌನ್ ಪೋಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರನ್ನ ಅಮಾನತು ಮಾಡಿ ಸರ್ಕಾರ ಆದೇಶಿಸಿದೆ.
ರಾಮ್ ರಹೀಮ್ ನಗರದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರು ಇರಲಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಶಿವಕುಮಾರ್ ಅವರನ್ನ ಅಮಾನತು ಮಾಡಲಾಗಿದೆ.
ಇನ್ನು ಮಂಡ್ಯ ಹೆಚ್ಚುವರಿ ಎಸ್ ಪಿ ತಿಮ್ಮಯ್ಯ ಅವರನ್ನ ಜಾಗ ತೋರಿಸದೇ ವರ್ಗಾವಣೆ ಮಾಡಲಾಗಿದ್ದು ಅವರ ಜಾಗಕ್ಕೆ ಬೇರೊಬ್ಬ ಅಧಿಕಾರಿಯನ್ನ ನೇಮಿಸಲಾಗಿದೆ.
Key words: Maddur, riot case, CPI, suspended,