ಸಿ.ಆರ್ ಮನೋಹರ್ ಹಾಗೂ ಮಾಜಿ ಶಾಸಕ ಎ. ನಾಗರಾಜು ಕಾಂಗ್ರೆಸ್ ಸೇರ್ಪಡೆ.

ಬೆಂಗಳೂರು,ಡಿಸೆಂಬರ್,2,2021(www.justkannada.in):   ಡಿಸೆಂಬರ್ 10 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ  ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು  ಈ ಮಧ್ಯೆ  ಜೆಡಿಎಸ್ ನ ಸಿ.ಆರ್. ಮನೋಹರ್ ಹಾಗೂ ಮಾಜಿ ಶಾಸಕ ಎ.ನಾಗರಾಜು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ  ಸಿ.ಆರ್. ಮನೋಹರ್ ಹಾಗೂ ಎ.ನಾಗರಾಜು ಅವರು ತಮ್ಮ ನೂರಾರು ಬೆಂಬಲಿಗರೊಂದಿಗೆ ‘ಕೈ’ ಹಿಡಿದಿದ್ದಾರೆ. ಹಾಗೆಯೇ ಜೆಡಿಎಸ್ ನ ಡಾ.ಕೃಷ್ಣ ಸಹ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎನ್ನಲಾಗಿದೆ.

ಇಬ್ಬರು ಮುಖಂಡರು ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಜಾತ್ರೆ ಪ್ರಾರಂಭವಾಗಿದೆ. ಕಾಂಗ್ರೆಸ್ ನಲ್ಲಿ ಸಂಚಲನ ಉಂಟಾಗಿದೆ. ಆನೇಕರು ಕಾಂಗ್ರೆಸ್ ಕಡೆ ಬರುತ್ತಿದ್ದಾರೆ.  ಸಿಆರ್ ಮನೋಹರ್ ಮಾಜಿ ಶಾಸಕ ನಾಗರಾಜ್ ಯಾವುದೇ ಷರತ್ತಿಲ್ಲದೆ ನೂರಾರು ಬೆಂಬಲಿಗರ ಜತೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ದಾಂತಕ್ಕೆ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಎಲ್ಲರನ್ನೂ ಸ್ವಾಗತಿಸುತ್ತದೆ. ಎಂದರು.

Key words: CR Manohar – former MLA- A.Nagaraju –join-Congress