Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಕ್ಷೇತ್ರದ ಜನರಲ್ಲಿ ಸಮಾನತೆ, ಸೌಹಾರ್ದತೆ ಮೂಡಿಸಿ- ನೂತನ ಶಾಸಕರಿಗೆ ಸ್ಪೀಕರ್ ಯು.ಟಿ ಖಾದರ್ ಕಿವಿಮಾತು

ಕ್ಷೇತ್ರದ ಜನರಲ್ಲಿ ಸಮಾನತೆ, ಸೌಹಾರ್ದತೆ ಮೂಡಿಸಿ- ನೂತನ ಶಾಸಕರಿಗೆ ಸ್ಪೀಕರ್ ಯು.ಟಿ ಖಾದರ್ ಕಿವಿಮಾತು

ಬೆಂಗಳೂರು,ಜೂನ್,26,2023(www.justkannada.in): ನೀವು ಮೊದಲ ಬಾರಿ ಶಾಸಕರಲ್ಲ, ಪರ್ಮನೆಂಟ್ ಶಾಸಕರಾಗಿರಬೇಕು.  ಕ್ಷೇತ್ರದ ಜನರಲ್ಲಿ ಸಮಾನತೆ, ಸೌಹಾರ್ದತೆ ಮೂಡಿಸಿ ಎಂದು ನೂತನ ಶಾಸಕರಿಗೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಕಿವಿಮಾತು ಹೇಳಿದರು.

ನೂತನ ಶಾಸಕರ ತರಬೇತಿ ಶಿಬಿರದಲ್ಲಿ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್, ವಿಧಾನಸಭೆ ಒಳಗೆ ಆತ್ಮವಿಶ್ವಾಸದಿಂದ ಇರಲು ಈ ಶಿಬಿರ ಅನುಕೂಲ. ಈ ಶಿಬಿರದಲ್ಲಿ ಆರೋಗ್ಯದ ಬಗ್ಗೆಯೂ ಶಾಸಕರಿಗೆ ತರಬೇತಿ ನೀಡಲಾಗುತ್ತೆ ಎಂದರು.

ರಾಜಕೀಯ ಒಂದು ಸರ್ಕಸ್ ಕಂಪನಿ ಇದ್ದ ಹಾಗೆ. ಈ ಸರ್ಕಸ್​ ಕಂಪನಿಯಲ್ಲಿ ಹುಲಿ, ಸಿಂಹ, ಕೋತಿ, ಆನೆ ಎಲ್ಲವೂ ಇರುತ್ತೆ. ರಾಜಕೀಯದಲ್ಲೂ ಹಾಗೆ ಎಲ್ಲರೂ ಸಿಂಹ ಆಗಲು ಸಾಧ್ಯವಿಲ್ಲ. ಸರ್ಕಸ್ ​​ನಲ್ಲಿ ರಿಂಗ್ ಮಾಸ್ಟರ್ ಹಿಂದೆ ಎಲ್ಲಾ ಪ್ರಾಣಿಗಳು ಹೋಗುತ್ತವೆ. ಹಾಗೆ ನೀವು ರಾಜಕೀಯದಲ್ಲಿ ರಿಂಗ್ ಮಾಸ್ಟರ್ ಆಗಬೇಕು. ಶಾಸಕರು ಕ್ಷೇತ್ರದ ಜನರಲ್ಲಿ ಸಮಾನತೆ, ಸೌಹಾರ್ದತೆ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಸಲಹೆ ನೀಡಿದರು.

Key words: Create -equality – harmony – people – constituency – Speaker -UT Khader -new MLAs