ಕ್ರಿಕೆಟ್: ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡ ಅಫ್ಘಾನಿಸ್ತಾನ

ಬೆಂಗಳೂರು, ನವೆಂಬರ್ 07, 2023 (www.justkannada.in): ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದೆ.

ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಆತಿಥ್ಯವನ್ನು ಪಾಕಿಸ್ತಾನ ವಹಿಸಿಕೊಳ್ಳಲಿದ್ದು, ವಿಶ್ವಕಪ್‌ನಲ್ಲಿ ಆಡುತ್ತಿರುವ ತಂಡಗಳ ಪೈಕಿ ಅಗ್ರ 7 ತಂಡಗಳು ಮತ್ತು ಆತಿಥೇಯ ಪಾಕಿಸ್ತಾನ ಸೇರಿ ಒಟ್ಟು 8 ತಂಡಗಳು ಮಾತ್ರ ಅರ್ಹತೆ ಪಡೆದುಕೊಳ್ಳಲಿವೆ.

ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ನಿರೀಕ್ಷೆಗೂ ಮೀರಿ ಅದ್ಭುತ ಪ್ರದರ್ಶನ ನೀಡಿ ಅಬ್ಬರಿಸುತ್ತಿರುವ ಅಫ್ಘಾನಿಸ್ತಾನ ತಂಡ ಇನ್ನು ಕೂಡ ಸೆಮಿಫೈನಲ್‌ ರೇಸ್ ನಲ್ಲಿದೆ.

ಅಂದಹಾಗೆ ಈ ಬಾರಿಯ ವಿಶ್ವಕಪ್‌ನಲ್ಲಿ ಈ ಹಿಂದೆ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿರುವ ಮೂರು ತಂಡಗಳನ್ನು ಅಫ್ಘಾನಿಸ್ತಾನ ತಂಡ ಮಣಿಸಿದೆ ಎನ್ನುವುದು ಗಮನಾರ್ಹ ವಿಷಯವಾಗಿದೆ.