ಕ್ರಿಕೆಟ್: ಆಸ್ಟ್ರೇಲಿಯ ವಿರುದ್ಧ ಸರಣಿ ಜಯಿಸಿ ದಾಖಲೆ ಬರೆದ ಬಾಂಗ್ಲಾದೇಶ

ಬೆಂಗಳೂರು, ಆಗಸ್ಟ್ 07, 2021 (www.justkannada.in): ಬಾಂಗ್ಲಾದೇಶವು ಎಲ್ಲ 3 ಮಾದರಿಯ ಕ್ರಿಕೆಟ್ ನಲ್ಲಿ ಇದೇ ಮೊದಲ ಬಾರಿ ಆಸ್ಟ್ರೇಲಿಯ ವಿರುದ್ಧ ಸರಣಿ ಜಯಿಸಿ ದಾಖಲೆ ಬರೆದಿದೆ.

ಆತಿಥೇಯ ಬಾಂಗ್ಲಾದೇಶ ತಂಡ ಆಸ್ಟ್ರೇಲಿಯ ತಂಡದ ವಿರುದ್ಧ 10 ರನ್ ಗಳ ರೋಚಕ ಜಯ ದಾಖಲಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 3-0 ಮುನ್ನಡೆ ಪಡೆದು ಸರಣಿ ವಶಪಡಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 9 ವಿಕೆಟ್ ನಷ್ಟಕ್ಕೆ ಕೇವಲ 127 ರನ್ ಗಳಿಸಿತ್ತು. ಗೆಲ್ಲಲು 128 ರನ್ ಸುಲಭ ಗುರಿ ಬೆನ್ನಟ್ಟಿದ್ದ ಆಸ್ಟ್ರೇಲಿಯ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 117 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಶರೀಫುಲ್ ಇಸ್ಲಾಂ(2-29) ಯಶಸ್ವಿ ಬೌಲರ್ ಎನಿಸಿಕೊಂಡರು.