Saturday, August 1, 2026

BDA Apartments

Home Front Page ಕ್ರಿಕೆಟ್: ಭಾರತ ಹಾಗೂ ಆಸ್ಟ್ರೇಲಿಯಾ 3ನೇ ಏಕದಿನ ಪಂದ್ಯ ಇಂದು

ಕ್ರಿಕೆಟ್: ಭಾರತ ಹಾಗೂ ಆಸ್ಟ್ರೇಲಿಯಾ 3ನೇ ಏಕದಿನ ಪಂದ್ಯ ಇಂದು

ಬೆಂಗಳೂರು, ಸೆಪ್ಟೆಂಬರ್ 27, 2023 (www.justkannada.in): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಇಂದು ನಡೆಯಲಿದೆ.

ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು,  ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.

ಇನ್ನು ಈ ಮೈದಾನದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸುವ ತಂಡಕ್ಕೆ ಹೆಚ್ಚಿನ ಅನುಕೂಲತೆಗಳಿದೆ.  ಎರಡನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಗೆಲುವು ಸಾಧಿಸಿದ್ದು ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಹೀಗಾಗಿ ಕೊನೆ ಪಂದ್ಯದಲ್ಲಿ ಗೆಲ್ಲುವ ಒತ್ತಡದಲ್ಲಿದೆ ಆಸಿಸ್ ಪಡೆ.

ಈವರೆಗೆ ಇಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿಯೂ ಮೊದಲು ಬ್ಯಾಟಿಂಗ್ ನಡೆಸಿದ ತಂಡ ಗೆಲುವು ಸಾಧಿಸಿದೆ. ಹೀಗಾಗಿ ಟಾಸ್ ಗೆದ್ದ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವ ನಿರೀಕ್ಷೆ ಇದೆ.