ಡಿಸೆಂಬರ್’ನಲ್ಲಿ ಕಿರುತೆರೆ ಕಲಾವಿದರಿಗಾಗಿ ಕ್ರಿಕೆಟ್ ಪಂದ್ಯಾವಳಿ (ಟಿಸಿಎಲ್‌)

ಬೆಂಗಳೂರು, ಅಕ್ಟೋಬರ್ 28, 2021 (www.justkannada.in): ಡಿಸೆಂಬರ್ ಎರಡನೇ ವಾರದಿಂದ ‘ಟೆಲಿವಿಷನ್ ಕ್ರಿಕೆಟ್ ಲೀಗ್’ (ಟಿಸಿಎಲ್‌) ನಡೆಯಲಿದ್ದು, ಇದರಲ್ಲಿ ಕಿರುತೆರೆ ಕಲಾವಿದರು ಭಾಗವಹಿಸಲಿದ್ದಾರೆ.

ಟಿಸಿಎಲ್‌ನಲ್ಲಿ ತಂಡಗಳು ಈಗಾಗಲೇ ಅಭ್ಯಾಸದಲ್ಲಿ ತೊಡಗಿವೆ. ಈ ಪಂದ್ಯಾವಳಿಯಲ್ಲಿ ಕ್ರೇಜಿ ಕಿಲ್ಲರ್ಸ್, ಗ್ಯಾಂಗ್ ಗರುಡಾಸ್, ಗ್ರೌಂಡ್ ಹಂಟರ್ಸ್, ಜಟಾಯು ಜೈಂಟ್ಸ್, ಕಿಂಗ್ ಕೇಸರಿಸ್, ಸರ್ಪ ಸ್ಟ್ರೈಕರ್ ಎಂಬ 6 ತಂಡಗಳಿರಲಿವೆ.

ದೀಪಕ್ ಹಾಗೂ ಮಂಜೇಶ್ ಸಾರಥ್ಯದಲ್ಲಿ ನಡೆಯುತ್ತಿರುವ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿಯಲ್ಲಿ 102 ಖ್ಯಾತನಾಮರು ಭಾಗಿಯಾಗಲಿದ್ದಾರೆ.