ಬಿಜೆಪಿ ಸೇರಿದ ಕ್ರಿಕೆಟಿಗ ಅಶೋಕ್ ದಿಂಡಾ

ಬೆಂಗಳೂರು, ಫೆಬ್ರವರಿ 25, 2021 (www.justkannada.in): ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಬಿಜೆಪಿ ಸೇರಿದ್ದಾರೆ.

ಕೋಲ್ಕತಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರ್ಜುನ್ ಸಿಂಗ್ ಉಪಸ್ಥಿತಿಯಲ್ಲಿ ದಿಂಡಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ವೇಗದ ಬೌಲರ್ ಆಗಿದ್ದ ಅಶೋಕ್ ದಿಂಡಾ ಇತ್ತೀಚೆಗಷ್ಟೇ ಎಲ್ಲ ಮಾದರಿಯ ಕ್ರಿಕೆಟಿನಿಂದ ನಿವೃತ್ತಿಯಾಗಿದ್ದರು.

ಅಶೋಕ್ ಭಾರತವನ್ನು 13 ಏಕದಿನ ಹಾಗೂ 9 ಟಿ-20 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದು, ಕ್ರಮವಾಗಿ 12 ಹಾಗೂ 17 ವಿಕೆಟ್ ಗಳನ್ನು ಪಡೆದಿದ್ದಾರೆ.