ಖಡಕ್ ಪೊಲೀಸ್ ಅಧಿಕಾರಿಯಾಗಲಿದ್ದಾರೆ ಕ್ರಿಕೆಟಿಗ ಇರ್ಫಾನ್ ಪಠಾಣ್‌

ಬೆಂಗಳೂರು, ಅಕ್ಟೋಬರ್ 16, 2019 (www.justkannada.in): ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್‌ ಕ್ರಿಕೆಟ್‌ ಕ್ರೀಸ್‌ನಿಂದ ಇದೀಗ ಬೆಳ್ಳಿ ತೆರೆ ಮೇಲೆ ಕಾಣಿಸಿಕೊಳ್ಳಲು ರೆಡಿಯಾಗಿದ್ದಾರೆ.

ಹೌದು. ಪಠಾಣ್‌ ಸಿನಿಮಾದಲ್ಲಿ ಖಡಕ್ ಪೊಲೀಸ್​ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಅಂದಹಾಗೆ ಇರ್ಫಾನ್​ ಪಠಾಣ್‌​ ತಮಿಳು ಸಿನಿಮಾದಲ್ಲಿ ನಟಿಸಲು ಆಸಕ್ತಿ ತೋರಿಸಿದ್ದಾರಂತೆ. ತಮಿಳು ನಿರ್ದೇಶಕ ಜ್ಞಾನ ಮುತ್ತು ‘ವಿಕ್ರಮ್​ 58’ ಎಂಬ ಸಿನಿಮಾ ಮಾಡುತ್ತಿದ್ದು, ಇದ್ರಲ್ಲಿ ಪೊಲೀಸ್​ ಅಧಿಕಾರಿಯಾಗಿ ಪಠಾಣ್​​ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.