ದಾದಾ ದಾಖಲೆ ಮುರಿದ ರೋಹಿತ್ ಶರ್ಮಾ !

ಇಂಗ್ಲೆಂಡ್, ಜೂನ್ 06, 2019 (www.justkannada.in): ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ವಿಶ್ವಕಪ್ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯದೊಂದಿಗೆ ಶುಭಾರಂಭ ಮಾಡಿದೆ. ಇದರ ಜತೆ ರೋಹಿತ್ ಶರ್ಮಾ ಸೌರವ್ ಗಂಗೂಲಿ ದಾಖಲೆ ಮುರಿದಿದ್ದಾರೆ.

ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಅಜೇಯ ಶತಕ ಸಿಡಿಸಿದ್ದಾರೆ. 144 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 13 ಬೌಂಡರಿ, 2 ಸಿಕ್ಸರ್ ಸಹಿತ 122 ರನ್ ಗಳಿಸಿದ್ದಾರೆ.

ಈ ಮೂಲಕ ಏಕದಿನ ಕ್ರಿಕೆಟ್ ನಲ್ಲಿ 23ನೇ ಶತಕ ದಾಖಲಿಸಿದ ಅವರು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ದಾಖಲೆಯನ್ನು ಮುರಿದಿದ್ದಾರೆ.

ಚೇಸಿಂಗ್ ವೇಳೆಯಲ್ಲಿ ರೋಹಿತ್ ಶರ್ಮಾ ಗಳಿಸಿದ ಶತಕಗಳ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.