Wednesday, August 12, 2026

BDA Apartments

Home Front Page ಸಿ.ಟಿ ರವಿ ಆಕ್ಷೇಪಾರ್ಹ ಪದ ಬಳಕೆ ವಿಚಾರ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು..?

ಸಿ.ಟಿ ರವಿ ಆಕ್ಷೇಪಾರ್ಹ ಪದ ಬಳಕೆ ವಿಚಾರ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು..?

ಮಂಡ್ಯ,ಡಿಸೆಂಬರ್,20,2024 (www.justkannada,in):  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಎಂಎಲ್ ಸಿ ಸಿಟಿ ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆಂಬ ಆರೋಪ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಟಿ ರವಿ ಯಾಕೆ ಆ ಪದಸಿದ್ದಾರೋ ನನಗೆ ಗೊತ್ತಿಲ್ಲ. ನನಗೆ ಅವಾಚ್ಯ ಪದ ಬಳಸಿದರು ಅಂತ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೈದಿದ್ದು ನನಗೆ ಗೊತ್ತಿಲ್ಲ ಅಲ್ಲಿ ಬೇರೆಯವರು ಕೇಳಿದ್ದಾರೆ ಅಲ್ವ? ಆಡಿಯೋ ವಿಡಿಯೋ ಬಗ್ಗೆ ನನಗೆ ಗೊತ್ತಿಲ್ಲ. ಅಲ್ಲದೆ ಘಟನೆ ನಡೆದಾಗ ಹೊರಟ್ಟಿ ಅವರು ಇರಲಿಲ್ಲ ಎಂದು ತಿಳಿಸಿದರು.

ಅವಾಚ್ಯ ಪದ ಬಳಕೆ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಅಲ್ಲಿ ಇದ್ದವರು ಸಹ ಕೇಳಿಸಿಕೊಂಡಿದ್ದಾರೆ ಆಡಿಯೋ ರೆಕಾರ್ಡ್ ಆಗಿದೆಯಲ್ಲ. ಸಿಟಿ ರವಿಯವರು ಲಕ್ಷ್ಮಿ ಹೆಬ್ಬಾಳಕರ್ ಗೆ ಅವಾಚ್ಯ ಪದಗಳಿಂದ ಬೈದಿದ್ದೇನೆ ಎಂದು ಒಪ್ಪಿಕೊಳ್ಳುತ್ತಾರಾ? ಹಾಗಾಗಿ ಅವರನ್ನು ಬಂಧಿಸಲಾಗಿದೆ. ಇದು ಒಂದು ರೀತಿಯ ಕ್ರಿಮಿನಲ್ ಅಫೆನ್ಸ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: CT Ravi, offensive word,  CM Siddaramaiah