Tuesday, August 18, 2026

BDA Apartments

Home Front Page ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಬೇಕು ಎಂದ ಸಚಿವ ಶಿವರಾಜ ತಂಗಡಗಿಗೆ ಸಿ.ಟಿ ರವಿ ತಿರುಗೇಟು.

ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಬೇಕು ಎಂದ ಸಚಿವ ಶಿವರಾಜ ತಂಗಡಗಿಗೆ ಸಿ.ಟಿ ರವಿ ತಿರುಗೇಟು.

ಬೆಂಗಳೂರು, ಮಾರ್ಚ್​ 25,2024(www.justkannada.in): ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿಗೆ  ಮಾಜಿ ಸಚಿವ ಸಿಟಿ ರವಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಿ.ಟಿ ರವಿ, ಸಂಸ್ಕೃತಿಯೇ ಗೊತ್ತಿಲ್ಲದವರಿಗೆ ಕನ್ನಡ ಸಂಸ್ಕೃತಿ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ. ಸಚಿವರ ಹೇಳಿಕೆ ಇದು ಕನ್ನಡ ಸಂಸ್ಕೃತಿ ಇಲಾಖೆಗೆ ಮಾಡಿದ ಅಪಚಾರ. ಅವರ ಹೇಳಿಕೆಗೆ ಪ್ರತಿಯಾಗಿ, ‘ಬಾರಪ್ಪ ನಿಮ್ಮಪ್ಪನಿಗೆ ಹುಟ್ಟಿದ್ದರೆ ಹೊಡಿ’ ಎಂದು ಹೇಳಬೇಕು ಅಂದುಕೊಂಡಿದ್ದೆ. ಆದರೆ, ತಂಗಡಗಿ ಮಟ್ಟಕ್ಕೆ ನಾವು ಇಳಿದು ಮಾತನಾಡಲು ಹೋಗಲ್ಲ. ಇಂಥವರನ್ನು ಸಂಪುಟದಲ್ಲಿ ಇಟ್ಟುಕೊಳ್ಳಬಾರದು ಎಂದರು.

ಶಿವರಾಜ್ ತಂಗಡಗಿಯನ್ನು ಸಚಿವ ಸಂಪುಟದಿಂದ  ವಜಾಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಸಿ.ಟಿ ರವಿ ಆಗ್ರಹಿಸಿದ್ದಾರೆ.  ಕೊಪ್ಪಳದ ಕಾರಟಗಿಯಲ್ಲಿ ಮಾತನಾಡಿದ್ದ ಸಚಿವ ಶಿವರಾಜ್ ತಂಗಡಗಿ, ಮೋದಿ ಸರ್ಕಾರ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿತ್ತು. ಆದರೆ, ಮೋದಿ ಸರ್ಕಾರ ಭರವಸೆ ಈಡೇರಿಸಿಲ್ಲ. ‘ಮೋದಿ ಮೋದಿ’ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿಕೆ ನೀಡಿದ್ದರು ಎನ್ನಲಾಗಿದೆ.

Key words: CT Ravi – Minister -Shivraj Thangadagi – Modi – slapped.