ಕೋಲಾರ, ನವೆಂಬರ್,3,2026 (www.justkannada.in): ಪ್ರತಿಲೀಟರ್ ಮೊಸರಿನ ದರವನ್ನ 14 ರೂ. ಹೆಚ್ಚಿಸಿದ್ದ ರಾಜ್ಯ ಸರ್ಕಾರ ಇದೀಗ 2 ರೂ. ಕಡಿಮೆ ಮಾಡಲು ನಿರ್ಧರಿಸಿದ್ದು ಈ ನಡೆಗೆ ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಆರ್.ಅಶೋಕ್, ಸರ್ಕಾರ ಪಾಪರ್ ಆಗಿರುವುದನ್ನು ಅವರೇ ಒಪ್ಪಿಕೊಂಡಿದ್ದಾರೆ. ಮೊಸರಿನ ದರ 14 ರೂ ಜಾಸ್ತಿ ಮಾಡಿ 2 ರೂ ಇಳಿಕೆ ಅಂತಾ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಫಂಡ್ ಮಾಡುವುದಕ್ಕೆ ಇಷ್ಟೆಲ್ಲಾ ನಡೆಯುತ್ತಿದೆ ಎಂದು ಟೀಕಿಸಿದರು.
ಬೆಲೆ ಏರಿಕೆ ಖಂಡಿಸಿ ಬಿಜೆಪಿ ಹೋರಾಟ ಮಾಡುತ್ತೆ ದೀಪಾವಳಿ ಹಬ್ಬ ಬಂದಿದೆ. ಯಾರಿಗೂ ಸಿಹಿ ಇಲ್ಲ ಎಲ್ಲರಿಗೂ ಕಹಿ. ಕರ್ನಾಟಕದಲ್ಲಿ ಈಗ ಚುನಾವಣೆ ನಡೆದರೂ ಎನ್ ಡಿಎ ಅಧಿಕಾರಕ್ಕೆ ಬರುತ್ತೆ ಎಂದು ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು.







