ಹಾಸನಾಂಬೆ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ಕರೆಂಟ್ ಶಾಕ್:  ಕಾಲ್ತುಳಿತದಿಂದ  ಹಲವರಿಗೆ ಗಾಯ.

ಹಾಸನ,ನವೆಂಬರ್,10,2023(www.justkannada.in):  ಇಂದು ಹಾಸನಾಂಬೆ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ಕರೆಂಟ್ ಶಾಕ್ ಹೊಡೆದಿದ್ದು, ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತದಿಂದ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಹಾಸನಾಂಬೆ ದರ್ಶನಕ್ಕೆ  ಧರ್ಮ ದರ್ಶನ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ  ಭಕ್ತರಿಗೆ ವಿದ್ಯುತ್ ಶಾಕ್ ತಟ್ಟಿದ್ದು, ವಿದ್ಯುತ್ ಶಾಕ್ ನಿಂದಾಗಿ ಭಕ್ತಾಧಿಗಳು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಈ ವೇಳೆ ನೂಕು ನುಗ್ಗಲು ಉಂಟಾದ ಪರಿಣಾಮ, ಕಾಲ್ತುಳಿತ ಸಂಭವಿಸಿದೆ. ಇದರಿಂದ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿದ್ಯುತ್ ಶಾಕ್ ಬಳಿಕ ಕೂಡಲೇ ಫೀಸ್ ತೆಗೆಯಲಾಗಿದೆ. ಮುಂದೆ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಲಾಗಿದೆ. ವಿದ್ಯುತ್ ಶಾಕ್ ನಿಂದ ಕೆಲವರಿಗೆ ಗಾಯವಾಗಿದ್ದು ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ದಾಖಲಿಸಲಾಗಿದೆ.

Key words: Current shock – devotees – Hassanambe – injured