Thursday, August 13, 2026

BDA Apartments

Home Front Page ಸದ್ಯ ನಾನೇ ಸಿಎಂ, ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ: ಅಧಿಕಾರ ಹಂಚಿಕೆ ಗೊಂದಲಕ್ಕೆ ತೆರೆ ಎಳೆದ್ರಾ ಸಿದ್ಧರಾಮಯ್ಯ.

ಸದ್ಯ ನಾನೇ ಸಿಎಂ, ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ: ಅಧಿಕಾರ ಹಂಚಿಕೆ ಗೊಂದಲಕ್ಕೆ ತೆರೆ ಎಳೆದ್ರಾ ಸಿದ್ಧರಾಮಯ್ಯ.

ವಿಜಯನಗರ, ನವೆಂಬರ್,2,2023(www.justkannada.in): ಸದ್ಯ ನಾನೇ ಸಿಎಂ,   ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿದ್ದು, ಎರಡುವರೆ ವರ್ಷದ ಬಳಿಕ ಅಧಿಕಾರ ಹಂಚಿಕೆ ವಿಚಾರಕ್ಕೆ ತೆರೆ ಎಳೆದ್ರಾ ಎಂಬ ಕುತೂಹಲ ಉಂಟಾಗಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಿಗೆ ಅಧಿಕಾರ ಇಲ್ಲದೆ ಇರಲು ಆಗಲ್ಲ. ನಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ. ಸದ್ಯ ನಾನೇ ಮುಖ್ಯಮಂತ್ರಿ, ನಾನೇ ಮುಂದುವರಿಯುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ಡಿಸಿಎಂ ಮಾಡುವುದು ಹೈಕಮಾಂಡ್  ಬಿಟ್ಟ ವಿಚಾರ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಠಿಸುವ ಬಗ್ಗೆ  ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.

Key words: Currently- I am – CM, I will -continue -Siddaramaiah