Thursday, August 6, 2026

BDA Apartments

Home Front Page ಏನೇ ತೀರ್ಮಾನಿಸಿದ್ರೂ ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ- ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್….

ಏನೇ ತೀರ್ಮಾನಿಸಿದ್ರೂ ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ- ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್….

ಬೆಂಗಳೂರು,ಜ,18,2020(www.justkannada.in):  ಈಗ ಏನೇ ತೀರ್ಮಾನಿಸಿದರೂ ಸದ್ಯಕ್ಕಂತೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.

ಇಂದು ರಾಜ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮಿಸಿದ್ದು ಹುಬ್ಬಳ್ಳಿಗೆ ಭೇಟಿ ನೀಡಿದ್ದಾರೆ. ಈ ನಡುವೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನದಲ್ಲಿ ಬರುವ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುತ್ತಾರೆ ಎನ್ನಲಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್,  ಇಂದೇ ಸಚಿವ ಸಂಪುಟ ವಿಸ್ತರಣೆ ಕುರಿತು ತೀರ್ಮಾನವಾಗುತ್ತದೆ. ಅಮಿತ್ ಶಾ ಹಾಗೂ ಯಡಿಯೂರಪ್ಪ ಈ ಕುರಿತು ಚರ್ಚೆ ನಡೆಸುತ್ತಾರೆ. ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನಿಸ್ತಾರೆ. ಆದರೇ ಏನೇ ತೀರ್ಮಾನ ತೆಗೆದುಕೊಂಡರೂ ಸದ್ಯ ಸಂಪುಟ ವಿಸ್ತರಣೆ ಇಲ್ಲ ಎಂದರು.

ಹಾಗೆಯೇ ನಾಳೆ ಸಿಎಂ ಬಿಎಸ್ ಯಡಿಯೂರಪ್ಪ ವಿದೇಶಕ್ಕೆ ತೆರಳುತ್ತಾರೆ. ವಿದೇಶದಿಂದ ಸಿಎಂ ಬಿಎಸ್ ವೈ ವಾಪಸ್ಸಾದ ಬಳಿಕ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಹೀಗಾಗಿ ಈಗ ಸಂಪುಟ ವಿಸ್ತರಣೆ ಇಲ್ಲ ಎಂದು ಎಸ್.ಆರ್ ವಿಶ್ವನಾಥ್ ಸ್ಪಷ್ಪಪಡಿಸಿದರು.

Key words: currently –no-cabinet  expansion- CM Political Secretary-S R Viswanath.