Tuesday, September 8, 2026

BDA Apartments

Home Front Page ತಮಿಳುನಾಡಿಗೆ 6ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

ತಮಿಳುನಾಡಿಗೆ 6ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

ನವದೆಹಲಿ,ಸೆಪ್ಟಂಬರ್,8,2026 (www.justkannad.in):  ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಸಮಿತಿ ಶಾಕ್ ನೀಡಿದೆ.

ತಮಿಳುನಾಡಿಗೆ ಪ್ರತಿನಿತ್ಯ 15 ದಿನಗಳ ಕಾಲ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶಿಸಿದೆ. ಸರಿಯಾಗಿ ಮಳೆಯಾಗದ ಹಿನ್ನೆಲೆಯಲ್ಲಿ ಕರ್ನಾಟಕದ ಜಲಾಶಯಗಳಿಗೆ ಒಳಹರಿವು ಇಳಿಕೆಯಾಗಿದ್ದರೂ ಸಹ ಇದೀಗ ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಆದೇಶಿದೆ.

​ಈ ಕುರಿತು ಮಾತನಾಡಿರು ಜಲಸಂಪನ್ಮೂಲ ಸಚಿವ  ಚಲುವರಾಯಸ್ವಾಮಿ ಅವರು, “ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ನಮ್ಮ ರಾಜ್ಯದ ಅಧಿಕಾರಿಗಳು ಪ್ರಬಲವಾಗಿ ವಾದ ಮಂಡಿಸಿದ್ದಾರೆ. ತಮಿಳುನಾಡು 17 ಸಾವಿರ ಕ್ಯೂಸೆಕ್ಸ್ ನೀರಿಗೆ ಬೇಡಿಕೆ ಇಟ್ಟಿತ್ತು. ಆದರೆ ಕಳೆದ ಒಂದು ವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಒಳಹರಿವು ಕಡಿಮೆಯಾಗಿದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವುದೂ ನಮಗೆ ಅಸಾಧ್ಯ. ನಾವು ‘ಶೂನ್ಯ ನೀರು’ ಬಿಡುವ ನಿಟ್ಟಿನಲ್ಲಿ ಸತತ ಪ್ರಯತ್ನ ನಡೆಸುತ್ತಿದ್ದೇವೆ ಎಂದರು.

Key words: CWRC, orders, release , 6,000 cusecs , water , Tamil Nadu