ಬಂಗಾಳಕೊಲ್ಲಿಯಲ್ಲಿ ಸತತ ಎರಡು ಚಂಡಮಾರುತ ಸೃಷ್ಟಿ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ಸೆಪ್ಟೆಂಬರ್ 18, 2021 (www.justkannada.in): ಮುಂಗಾರು
ಪ್ರಭಾವದಿಂದಾಗಿ ಶನಿವಾರದಿಂದ ಕೆಲವು ರಾಜ್ಯಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.
ಬಂಗಾಳಕೊಲ್ಲಿಯಲ್ಲಿ ಸತತ ಎರಡು ಚಂಡಮಾರುತ ಸೃಷ್ಟಿಯಾಗಲಿದೆ ಎಂದು ಹವಾಮಾನ ಇಲಾಖೆ
ಎಚ್ಚರಿಕೆ ನೀಡಿದೆ.
ಪೂರ್ವ ಭಾರತದಲ್ಲಿ ಅಧಿಕ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ
ನೀಡಿತ್ತು, ಆದರೆ ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ನಿರೀಕ್ಷೆಯಂತೆ
ಮಳೆಯಾಗಿಲ್ಲ. ಆದರೆ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು ಸೆಪ್ಟೆಂಬರ್ ಆರಂಭದಿಂದಲೂ ಎಡೆಬಿಡದೆ
ಮಳೆ ಸುರಿಯುತ್ತಿದೆ. ಆದರೆ ರಾಜ್ಯದಲ್ಲಿ ಕಳೆದ 15 ದಿನಗಳಿಂದ ಕರಾವಳಿ ಹಾಗೂ ಮಲೆನಾಡು
ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಶನಿವಾರ ಮಳೆಯ ಆರ್ಭಟ ಕಡಿಮೆಯಾಗಿತ್ತು.
ಸೆಪ್ಟೆಂಬರ್ ಅಂತ್ಯದವರೆಗೂ ವಾಯವ್ಯ ಭಾರತದಲ್ಲಿ ಮುಂಗಾರು ನಿಲ್ಲುವುದಿಲ್ಲ. ಇದಕ್ಕೆ
ಪರಿಸ್ಥಿತಿ ಅನುಕೂಲಕರವಾಗಿಲ್ಲ ಎಂದು ಅವರು ಹೇಳಿದ್ದಾರೆ. ಸೆಪ್ಟೆಂಬರ್ನಲ್ಲಿ
ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ. ಇದರೊಂದಿಗೆ ಬಂಗಾಳಕೊಲ್ಲಿಯಲ್ಲಿ ಸತತ ಎರಡು
ಚಂಡಮಾರುತ ಸೃಷ್ಟಿಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.