ಬಿಪರ್​ ಜಾಯ್ ಚಂಡಮಾರುತ: ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ.

ಬೆಂಗಳೂರು,ಜೂನ್,9,2023(www.justkannada.in):   ಅರಬ್ಬಿ ಸಮುದ್ರದಲ್ಲಿ ಬಿಪರ್ ​ಜಾಯ್ ಚಂಡಮಾರುತವು ತೀವ್ರ ಸ್ವರೂಪ ಪಡೆದಿದ್ದು, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿಯನ್ನ ಹವಮಾನ ಇಲಾಖೆ ನೀಡಿದೆ.

ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಈ  ಮಧ್ಯೆ ನಿನ್ನೆ ದಕ್ಷಿಣ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿದ್ದು, ಬಿರು ಬಿಸಿಲಿನಿಂದ ಬೇಯುತ್ತಿದ್ದ ಜನರಿಗೆ ಮಳೆರಾಯ ತಂಪೆರೆದ್ದಿದ್ದಾನೆ.

Key words: Cyclone- Bipar Joy- Heavy- rains – coast of the state