ಬೆಳಗಾವಿ ,ಜು,27,2020(www.justkannada.in): ಬಿಮ್ಸ್ ಆಸ್ಪತ್ರೆಯಲ್ಲಿ ಸಿಲಿಂಡರ್ ಸ್ಟೋಟ ವಿಚಾರ ಸಂಬಂಧ ಇನ್ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಘಟನೆ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ.ಕೆ.ಸುಧಾಕರ್, ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ನಿನ್ನೆ o2 ಸಿಲಿಂಡರ್ ಸ್ಫೋಟಗೊಂಡು ಇಂಟರ್ನ, ನರ್ಸ್ ಹಾಗೂ ವಾರ್ಡ್ ಬಾಯ್‌ಗೆ ಕೈ ಮತ್ತು ಕಾಲುಗಳಿಗೆ ಸುಟ್ಟ ಗಾಯಗಳಾವಿವೆ ಎಂದು ತಿಳಿದು ನನಗೆ ತುಂಬಾ ನೋವಾಗಿದೆ. ಇಂತಹ ಘಟನೆಗಳು ಇನ್ಮುಂದೆ ಘಟಿಸದಂತೆ ಕ್ರಮ ವಹಿಸಲು ಸೂಚಿಸಿದ್ದೀನಿ. ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೀನಿ ಎಂದು ತಿಳಿಸಿದ್ದಾರೆ.
ನಿನ್ನೆ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಅದೃಷ್ಟವಶಾತ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾಗಿದ್ದರು.
Key words: Cylinder -explosion – Bims Hospital-Medical Education -Minister -Sudhakar.






