2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ, ಜುಲೈ, 1, 2025 (www.justkannada.in): ಕರ್ನಾಟಕ ಸರ್ಕಾರದ ವತಿಯಿಂದ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ ಮೈಸೂರು. ಇಲ್ಲಿ ಅಂಧ ಮಕ್ಕಳಿಗೆ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತರು https://nber-rehabcouncil.gov.in/ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜುಲೈ‌. 12 ಕೊನೆಯ ದಿನಾಂಕವಾಗಿರುತ್ತದೆ.

ಈ ವಿಶೇಷ D.Ed ಸಾಮಾನ್ಯ D.Ed ಗೆ ಸಮಾನಾಂತರವಾಗಿವೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ 50% (ಎಸ್.ಸಿ. ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45%) ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಈ ತರಬೇತಿ ಕಾರ್ಯಕ್ರಮಗಳು ರೆಗ್ಯೂಲರ್ ಆಗಿದ್ದು, ವಿಕಲಚೇತನರು ಸೇರಿದಂತೆ ಸಾಮಾನ್ಯ ವಿಧ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಈ ತರಬೇತಿಗಳು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ಬೋಧನಾ ಶುಲ್ಕ ಇರುವುದಿಲ್ಲ.

ತರಬೇತಿ ಕಾರ್ಯಕ್ರಮಗಳು

D.Ed.Spl.Ed(VI)- Helen Keller Govt. Teachers Training Centre for Visually Handicapped – KK016 D.Ed.Spl.Ed(HI) – Govt. Teachers Training Centre for Hearing Handicapped – KK015

ಉದ್ಯೋಗ ಅವಕಾಶಗಳು

ತರಬೇತಿಯನ್ನು ಪಡೆದ ವಿದ್ಯಾರ್ಥಿಗಳಿಗೆ ಹಲವು ಉದ್ಯೋಗ ಅವಕಾಶಗಳಿದ್ದು,

ರಾಜ್ಯ ಸರ್ಕಾರದ ಸಾಮಾನ್ಯ ಶಾಲೆ ಮತ್ತು ವಿಶೇಷ ಶಾಲೆಗಳೆರಡರಲ್ಲೂ ಶಿಕ್ಷಕರಾಗಬಹುದು.

ವಿಕಲಚೇತನರ ಇಲಾಖೆಯ ಅಡಿಯಲ್ಲಿ ಬರುವ ಸರ್ಕಾರಿ/ಅನುದಾನಿತ ಶಾಲೆಗಳು,

CBSC ಶಾಲೆಗಳಲ್ಲಿ ಶಿಕ್ಷಕರಾಗಬಹುದು.

ಸರ್ವ ಶಿಕ್ಷಣ ಅಭಿಯಾನದಲ್ಲಿ ಸಂಪನ್ಮೂಲ ಶಿಕ್ಷಕರಾಗಬಹುದು.

ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಬಹುದು.

ರಾಷ್ಟ್ರೀಯ ಸಂಸ್ಥೆಗಳು/ಪ್ರಾದೇಶಿಕ ಸಂಸ್ಥೆಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಬಹುದು.

ಮಾತಿನ ತರಬೇತಿ ಘಟಕಗಳಲ್ಲೂ ಕಾರ್ಯನಿರ್ವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ತರಬೇತಿ) ರವರ ಕಛೇರಿ, ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ಸರ್ಕಾರಿ ತರಬೇತಿ ಕೇಂದ್ರ, ಪುಲಿಕೇಶಿ ರಸ್ತೆ, ತಿಲಕ್ ನಗರ, ಮೈಸೂರು-570001 ದೂರವಾಣಿ ಸಂ: 0821-2491600 ಹಾಗೂ ತರಬೇತಿ ಸಂಯೋಜಕರು ಆಶಾ. ವಿ. ಹಿರೇಮಠ್ ದೂ- 9113561620, ಮತ್ತು ಟಿ.ಡಿ. ಮಂಜುನಾಥ ದೂ-9686762378 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

vtu

Key words: Applications, invited, D.Ed, training