ಕೆ.ಆರ್ ನಗರಕ್ಕೂ ತಟ್ಟಿದ ಪ್ರತಿಭಟನೆ ಕಾವು: ಡಿಕೆಶಿ ಬಂಧನ ಖಂಡಿಸಿ ರಸ್ತೆ ತಡೆ ನಡೆಸಿ ‘ಕೈ’ ಕಾರ್ಯಕರ್ತರಿಂದ ಆಕ್ರೋಶ…

ಮೈಸೂರು,ಸೆ,5,2019(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಮೈಸೂರು ಜಿಲ್ಲೆಯ ಕೆ.ಆರ್ ನಗರದಲ್ಲೂ ಪ್ರತಿಭಟನೆ ಬಿಸಿ ತಟ್ಟಿದೆ.

ಕೆ.ಆರ್ ನಗರದ ಪಟ್ಟಣದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಸರಣಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಕಾಂಗ್ರೆಸ್ –ಜೆಡಿಎಸ್ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಿ ಧರಣಿ ನಡೆಸಿದ್ದು,  ಅಂಗಡಿ ಮುಂಗಟ್ಟು ಮುಚ್ಚಿಸಿ ಕೇಂದ್ರ ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಹೊಸೂರು ಆಸ್ಪತ್ರೆ ವೃತ್ತದಲ್ಲಿ ರಾಮನಾಥಪುರ-ಕೆ.ಆರ್ ನಗರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದು ಈ ಹಿನ್ನೆಲೆ ರಾಮನಾಥಪುರ-ಕೆ.ಆರ್ ನಗರ ಮಾರ್ಗದ ರಸ್ತೆ ಸಂಚಾರ ಅರ್ಧಗಂಟೆಗಳ ಕಾಲ ಅಸ್ತವ್ಯಸ್ತವಾಗಿತ್ತು. ಪ್ರತಿಭಟನೆ ವೇಳೆ  ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: d.k shivakumar-arrest- k.r nagar-protest-congress-activitist