Friday, October 9, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Front Page ನಂದಿನಿ ಉತ್ಪನ್ನ ಬಗ್ಗೆ ಅಪಪ್ರಚಾರ  ಮಾಡಿದರೇ ಅಗತ್ಯ ಕ್ರಮ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್‌

ನಂದಿನಿ ಉತ್ಪನ್ನ ಬಗ್ಗೆ ಅಪಪ್ರಚಾರ  ಮಾಡಿದರೇ ಅಗತ್ಯ ಕ್ರಮ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್‌

ಬೆಂಗಳೂರು,ಫೆಬ್ರವರಿ,18,2026 (www.justkannada.in):  ನಂದಿನಿ ಉತ್ಪನ್ನ ಬಳಸಿದರೆ ಕ್ಯಾನ್ಸರ್‌ ಬರುತ್ತದೆ ಎಂಬ ಸುದ್ದಿ ಹರಿದಾಡುತ್ತಿರುವ  ಹಿನ್ನೆಲೆಯಲ್ಲಿ ಈ ಬಗ್ಗೆ  ಮಾಜಿ ಸಂಸದ, ಬಮೂಲ್‌ ಅಧ್ಯಕ್ಷ ಡಿ.ಕೆ. ಸುರೇಶ್‌ ಅವರು ಪ್ರತಿಕ್ರಿಯಿಸಿ ಅಗತ್ಯ ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ ಸುರೇಶ್, ನಂದಿನಿ ಗುಣಮಟ್ಟಕ್ಕೆ ಹೆಸರುವಾಸಿ. ನಂದಿನಿ ಉತ್ಪನ್ನಗಳನ್ನು ತಯಾರಿಸುವ ವೇಳೆ ಯಾವುದೇ ರೀತಿಯ ಕಲಬೆರಕೆ ಮಾಡುವುದಿಲ್ಲ. ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿರುತ್ತಾರೆ. ಈ ಬಗ್ಗೆ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ನಾವು ಖಾಸಗಿಯವರ ಜತೆ ಸ್ಪರ್ಧೆ ಮಾಡಬೇಕಾದಾಗ ಅಪಪ್ರಚಾರ ಮಾಡುವುದು ಸಹಜ. ನಂದಿನಿ ಯಾವತ್ತೂ ಗುಣಮಟ್ಟದ ಜತೆ ರಾಜಿಯಾಗಿಲ್ಲ. ನಂದಿನಿಗೆ ಎಷ್ಟೇ ನಷ್ಟವಾದರೂ ಎಂದಿಗೂ ಗ್ರಾಹಕರಿಗೆ ಹಾಗೂ ರೈತರಿಗೆ ಅನ್ಯಾಯ ಮಾಡಿಲ್ಲ, ಗುಣಮಟ್ಟದ ಉತ್ಪನ್ನಗಳನ್ನು ಮುಂದೆಯೂ ನೀಡಲಿದೆ ಎಂದು ಡಿಕೆ ಸುರೇಶ್ ತಿಳಿಸಿದರು.

Key words: action, Nandini product, false information, D.K. Suresh