Saturday, September 26, 2026

BDA Apartments

ಮಿಥುನ್ ಚಕ್ರವರ್ತಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ: ಸಿಎಂ ಸಿದ್ದರಾ...
Home Cinema ಮಿಥುನ್ ಚಕ್ರವರ್ತಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಅಭಿನಂದನೆ

ಮಿಥುನ್ ಚಕ್ರವರ್ತಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಸೆಪ್ಟಂಬರ್,30,2024 (www.justkannada.in): ಸಿನಿಮಾ ರಂಗದಲ್ಲಿ  ಶ್ರೇಷ್ಠ ಸಾಧನೆ ಮಾಡಿದವರಿಗೆ ನೀಡುವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಹಿಂದಿ ಚಿತ್ರರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿ ಭಾಜನರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಹಿಂದಿ ಚಿತ್ರರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ಅಭಿನಂದನೆಗಳು.

ತಮ್ಮ ಮನೋಜ್ಞ ಅಭಿನಯ, ಅಮೋಘ ನೃತ್ಯದ ಮೂಲಕ ಹಲವು ದಶಕಗಳ ಕಾಲ ಸಿನಿಪ್ರಿಯರನ್ನು ರಂಜಿಸಿದ ಮಿಥುನ್ ಚಕ್ರವರ್ತಿ ಈ ಗೌರವಕ್ಕೆ ಅತ್ಯಂತ ಅರ್ಹರು. ಇವರ ಜೀವನ ಸಾಧನೆ ಯುವ ನಟ – ನಟಿಯರಿಗೆ ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಿಥುನ್ ಚಕ್ರವರ್ತಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ VTU TOP BANNER 04

Key words: Dada Saheb Phalke Award, Mithun Chakraborty, CM Siddaramaiah