ದಲಿತ ವ್ಯಕ್ತಿ ಮೇಲೆ ಹಲ್ಲೆ ಬೆತ್ತಲೆ ಮೆರವಣಿಗೆ ಪ್ರಕರಣ: ಕೃತ್ಯ ಖಂಡಿಸಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಟ್ವಿಟ್..

ಚಾಮರಾಜನಗರ,ಜೂ,12,2019(www.justkannada.in): ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮವೊಂದರ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯವನ್ನ ಖಂಡಿಸಿ ಸಿಎಂ ಹೆಚ್,ಡಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.

ವ್ಯಕ್ತಿಯನ್ನ ಬೆತ್ತಲೆ ಮೆರವಣಿಗೆ ಮಾಡಿರುವುದು ಅಮಾನವೀಯವಾದ್ದದ್ದು. ಈ ಸಂಬಂಧ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಜಾತಿ ವೈಷಮ್ಯ ಇನ್ನು ಮುಂದುವರೆದಿರುವುದು ದುರದೃಷ್ಟಕರ ಇಂತಹ ಘಟನೆಯನ್ನ ಎಲ್ಲರೂ ವಿರೋಧಿಸಬೇಕು ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.

ಜೂನ್‌ 2 ರಂದು ಈ ಘಟನೆ ನಡೆದಿದ್ದು, ಸಾಮಾಜಿಕ ತಾಣಗಳಲ್ಲಿ ಅಮಾನವೀಯವಾಗಿ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಿರುವ  ದೃಶ್ಯಗಳು ವೈರಲ್‌ ಆಗಿವೆ. ಹಲ್ಲೆಗೊಳಗಾದ ವ್ಯಕ್ತಿಯ ಸಂಬಂದಿಯೊಬ್ಬರು ಗುಂಡ್ಲುಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

Key words:  Dalit person assault case. CM H. D. Kumaraswamy tweet condemned the incident.

#Dalitperson #assaultcase #CMHDKumaraswamy #tweet #condemned