Sunday, September 20, 2026

BDA Apartments

Home Cinema ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್:  ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿದ ಕೋರ್ಟ್

ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್:  ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿದ ಕೋರ್ಟ್

ಸಾಂದರ್ಭಿಕ ಚಿತ್ರ

ಬೆಂಗಳೂರು,ಡಿಸೆಂಬರ್,9,2024 (www.justkannada.in): ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಮಾಡಿದೆ.

ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ದರ್ಶನ್ ಪರ ವಕೀಲರ ಹಾಗೂ ಸರ್ಕಾರದ ಪರ ವಕೀಲರ ಸುದೀರ್ಘ ವಾದ-ಪ್ರತಿವಾದವನ್ನು ಆಲಿಸಿತು.

ಇಂದಿನ ವಿಚಾರಣೆ ವೇಳೆ ದರ್ಶನ್ ಪರ ವಾದ ಮಂಡಿಸಿದ ವಕೀಲ ಸಿ.ವಿ.ನಾಗೇಶ್,  ದರ್ಶನ್ ಗೆ ಸರ್ಜರಿ ಮಾಡಲು ವೈದ್ಯರು ದಿನಾಂಕ ನಿಗದಿ ಮಾಡಿದ್ದಾರೆ. ಡಿಸೆಂಬರ್ 11ರಂದು ದರ್ಶನ್ ಗೆ ಸರ್ಜರಿಗೆ ಡೇಟ್ ಫಿಕ್ಸ್ ಆಗಿದೆ. ಅಂದೇ ಅವರ ಮಧ್ಯಂತರ ಜಾಮೀನು ಕೂಡ ಮುಕ್ತಾಯವಾಗುತ್ತದೆ. ಹೀಗಾಗಿ ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು.

ಈ ವೇಳೆ ಹೈಕೋರ್ಟ್ ನಟ ದರ್ಶನ್ ರೆಗ್ಯೂಲರ್ ಬೇಲ್ ಅರ್ಜಿಯ ತೀರ್ಪು ಕಾಯ್ದಿರಿಸಿದ್ದು, ದರ್ಶನ್ ಮಧ್ಯಂತರ ಜಾಮೀನು ಅವಧಿಯನ್ನೂ ವಿಸ್ತರಿಸಿದೆ. ಜಾಮೀನು ಅರ್ಜಿ ವಿಚಾರಣೆ ಕುರಿತು ಮುಂದಿನ ಆದೇಶದವರೆಗೆ ಮಧ್ಯಂತರ ಜಾಮೀನು ವಿಸ್ತರಿಸಲಾಗುವುದು ಎಂದು ಕೋರ್ಟ್ ತಿಳಿಸಿತು.

Key words:  actor, Darshan, Court, extends, interim bail, period