Sunday, August 23, 2026

BDA Apartments

Home Cinema ಮೈಸೂರಲ್ಲಿ ಇಂದ್ರಜಿತ್ ಲಂಕೇಶ್ ವಿರುದ್ಧದರ್ಶನ್ ಅಭಿಮಾನಿಗಳ ಪ್ರತಿಭಟನೆ

ಮೈಸೂರಲ್ಲಿ ಇಂದ್ರಜಿತ್ ಲಂಕೇಶ್ ವಿರುದ್ಧದರ್ಶನ್ ಅಭಿಮಾನಿಗಳ ಪ್ರತಿಭಟನೆ

ಮೈಸೂರು, ಡಿಸೆಂಬರ್ 19, 2021 (www.justkannada.in): ಇಂದ್ರಜಿತ್ ಲಂಕೇಶ್ ವಿರುದ್ಧ ನಟ ದರ್ಶನ್ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.

ಇಂದ್ರಜಿತ್ ಲಂಕೇಶ್ ಫ್ಲೆಕ್ಸ್‌ಗೆ ಮಸಿ ಬಳಿದು, ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ನಟ ದರ್ಶನ್ ವಿರುದ್ಧ ಮಾತನಾಡಿದ್ದ ಇಂದ್ರಜಿತ್ ಲಂಕೇಶ್ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.

ಪೊಲೀಸರನ್ನ ಬಳೆ ತೊಟ್ಟುಕೊಳ್ಳಿ ಎಂದಿದ್ದ ಇಂದ್ರಜಿತ್ ಕ್ಷಮೆಯಾಚಿಸುವಂತೆ ಆಗ್ರಹಿಸಿ ಮೈಸೂರಿನ ಎಂಜಿ ರಸ್ತೆಯ ದೀವಾನ್ ಪೂರ್ಣಯ್ಯ ಛತ್ರದ ಬಳಿ ಪ್ರತಿಭಟನೆ ನಡೆಸಿದರು.

ನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕನ್ನಡ ಚಳುವಳಿ ಕೇಂದ್ರ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಇಂದ್ರಜಿತ್ ಲಂಕೇಶ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು.