ನವದೆಹಲಿ ,ಆಗಸ್ಟ್,14,2025 (www.justkannada.in): ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ಕುರಿತು ಇಂದು ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ಹೊರಬೀಳಲಿದೆ.
ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಈ ಮಧ್ಯೆ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಜಾಮೀನು ರದ್ದುಗೊಳಿಸುವಂತೆ ಮನವಿ ಮಾಡಿತ್ತು.
ಈ ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠ ವಾದ ಪ್ರತಿವಾದ ಆಲಿಸಿ ತೀರ್ಪನ್ನ ಕಾಯ್ದಿರಿಸಿತ್ತು. ಇದೀಗ ಇಂದು ತೀರ್ಪು ಪ್ರಕಟವಾಗಲಿದ್ದು ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
Key words: bail , actor, Darshan, decided, Supreme Court, today.