ನವದೆಹಲಿ,ಆಗಸ್ಟ್,14,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್ ಎಲ್ಲಾ ಆರೋಪಿಗಳನ್ನ ಕೂಡಲೇ ಬಂಧಿಸುವಂತೆ ಆದೇಶಿಸಿದೆ.
ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್ ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠವು, ಹೈಕೋರ್ಟ್ ಲೋಪವನ್ನ ಎತ್ತಿ ತೋರಿಸಿತು.
ಅಲ್ಲದೆ ಜೈಲಿನಲ್ಲಿ ಆರೋಪಿ ದರ್ಶನ್ ಗೆ ವಿಶೇಷ ಆತಿಥ್ಯ ನೀಡಿದಕ್ಕೆ ಗರಂ ಆದ ನ್ಯಾಯಪೀಠ, ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಬಾರದು. ಯಾರು ಎಷ್ಟೇ ದೊಡ್ಡವರಾಗಿದ್ದರೂ ಕಾನೂನಿಗಿಂತ ದೊಡ್ಡವರಲ್ಲ. ಇನ್ಮುಂದೆ ಯಾವುದೇ ಪೋಟೊ ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ. ಆರೋಪಿ ಜೈಲಿ ನಲ್ಲಿ ಕುಳಿತು ಸಿಗರೇಟ್ ಸೇದಿದರೆ ಜೈಲು ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಇದು ಲ್ಯಾಂಡ್ ಮಾರ್ಕ್ ತೀರ್ಪು ಎಂದು ನ್ಯಾಯಪೀಠ ವಾರ್ನಿಂಗ್ ನೀಡಿತು.
Key words: Renukaswamy, murder case, Arrest, accused, Darshan, Supreme Court