ಮುಂದಿನ ತಿಂಗಳು ಆಸ್ಟ್ರೇಲಿಯಾಗೆ ಹಾರಲಿರುವ ದಚ್ಚು !

ಬೆಂಗಳೂರು, ಜುಲೈ 06, 2019 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಸ್ಟ್ ಮೊದಲ ವಾರದಲ್ಲಿ ಆಸ್ಟ್ರೇಲಿಯಾಗೆ ತೆರಳಿದ್ದಾರೆ.

ಒಡೆಯ ಚಿತ್ರದ ಎರಡು ಹಾಡುಗಳ ಶೂಟಿಂಗ್ ಆಸ್ಟ್ರೇಲಿಯಾದಲ್ಲಿ ನಡೆಯಲಿದ್ದು, ಇದಕ್ಕಾಗಿ 15 ದಿನಗಳ ಕಾಲ ಆಸಿಸ್ ಗೆ ತೆರಳಿದ್ದಾರೆ.

ಇನ್ನು ಒಡೆಯ ತೆಲುಗಿನ ‘ವೀರಂ’ ಚಿತ್ರದ ಅವತರಣಿಕೆಯಾಗಿದ್ದು, ಕನ್ನಡಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಂಡಿರುವ ನಿರ್ದೇಶಕ ಎಂ.ಡಿ.ಶ್ರೀಧರ್, ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಇನ್ನು, ನಿರ್ದೇಶಕ ಎಂ.ಡಿ.ಶ್ರೀಧರ್ ಅವರು ಈ ಹಿಂದೆ ದರ್ಶನ್ ಅಭಿನಯದಲ್ಲಿ ‘ಪೊರ್ಕಿ’ ಮತ್ತು ‘ಬುಲ್ ಬುಲ್’ ಚಿತ್ರವನ್ನು ನಿರ್ದೇಶಿಸಿದ್ದರು.