Saturday, August 8, 2026

BDA Apartments

Home Cinema ನಟ ದರ್ಶನ್ ಸೇರಿ 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನಟ ದರ್ಶನ್ ಸೇರಿ 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಸಾಂದರ್ಭಿಕ ಚಿತ್ರ

ಬೆಂಗಳೂರು,ನವೆಂಬರ್,28,2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.

ಇಂದು ಹೈಕೋರ್ಟ್ ನ್ಯಾಯಪೀಠದಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಸಾಕ್ಷಿಗಳ ಹೇಳಿಕೆ, ಸ್ಥಳ ಮಹಜರು ಸೇರಿದಂತೆ ವಿವಿಧ ವಿಷಯಗಳನ್ನು ಪ್ರಸ್ತಾಪಿಸಿ ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದರು.

ವಾದ ಆಲಿಸಿದ ನ್ಯಾಯಪೀಠವು, ಸರ್ಜರಿ ಅಗತ್ಯವಿದೆ ಅಂತ ವರದಿ ನೀಡಿ ಮಧ್ಯಂತರ ಜಾಮೀನು ಪಡೆಯಲಾಗಿದೆ. ಆದರೆ ಇನ್ನೂ ಸರ್ಜರಿ ಮಾಡಿಲ್ಲ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು, ಎಂಆರ್‌ಐ ಸ್ಕ್ಯಾನ್ ಆಗಿದೆ. ಬಿ.ಪಿ. ವ್ಯತ್ಯಾಸವಾಗುತ್ತಿದೆ. ಅದು ಸರಿ ಹೋಗದೇ ಯಾವುದೇ ಟ್ರೀಟ್ ಮೆಂಟ್ ಕೊಡಲಾಗುವುದಿಲ್ಲ. ಸರ್ಜರಿ ಬಗ್ಗೆ ವೈದ್ಯರು ತೀರ್ಮಾನಿಸುತ್ತಾರೆ’ ಎಂದು ಹೇಳಿದರು. ವಾದ ಆಲಿಸಿದ ಬಳಿಕ ಹೈಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.

Key words: actor Darshan, Bail application, hearing, High court