ಕೊರೊನಾದಷ್ಟೇ ವೇಗವಾಗಿ ಹರಡುವ ಸುಳ್ಳು ಸುದ್ದಿ ನಂಬಬೇಡಿ ಎಂದ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು, ಜೂನ್ 25, 2020 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕೊರೋನಾಗೆ ತುತ್ತಾಗಿದ್ದಾರೆ ಎಂಬ ಸುದ್ದಿಯೊಂದು ಹರಡಿದೆ. ಈ ಕುರಿತು ಸ್ವತಃ ವಿಜಯಲಕ್ಷ್ಮೀ ಸ್ಪಷ್ಟನೆ ನೀಡಿದ್ದಾರೆ.

ಕೊರೋನಾ ಹರಡುವಷ್ಟೇ ವೇಗದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಡುತ್ತಿವೆ. ಈ ಕುರಿತೂ ಜಾಗೃತಿ ವಹಿಸುವುದು ಒಳ್ಳೆಯದ್ದು ಎಂದಿದ್ದಾರೆ.

ನಾನು ಕೊರೋನಾಗೆ ತುತ್ತಾಗಿದ್ದೇನೆಂಬ ಸುದ್ದಿ ಹರಡಿದೆ. ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ. ಸುಳ್ಳು ಸುದ್ದಿಗಳನ್ನು ನಂಬಬೇಡಿ. ಇಂತಹ ಕಷ್ಟದ ಸಮಯದಲ್ಲಿ ಪ್ರತಿಯೊಬ್ಬರೂ ಸುರಕ್ಷಿತರಾಗಿರಿ ಎಂದು ವಿಜಯಲಕ್ಷ್ಮೀ ಹೇಳಿದ್ದಾರೆ.