ನಾಳೆ ಮೈಸೂರು ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ.

ಮೈಸೂರು,ಅಕ್ಟೋಬರ್,13,2021(www.justkannada.in): ನಾಳೆ  ಮೈಸೂರು ಅರಮನೆಯಲ್ಲಿ ಆಯುಧಪೂಜೆ ಸಂಭ್ರಮವಾಗಿದ್ದು ಬೆಳಗ್ಗೆ 5.30ರಿಂದ ಪೂಜಾ ವಿಧಿ ವಿಧಾನ ಆರಂಭವಾಗಲಿದೆ.

ಆಯುಧ ಪೂಜೆ ಹಿನ್ನೆಲೆ ನಾಳೆ ಬೆಳಿಗ್ಗೆ 7.45ಕ್ಕೆ ರಾಜರ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆ ಮಾಡಲಾಗುತ್ತದೆ ಪೂಜೆ ಸಲ್ಲಿಸಿ ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆ ಕಲ್ಯಾಣಮಂಟಪಕ್ಕೆ ಕೊಂಡೊಯ್ಯಲಾಗುತ್ತದೆ. ನಂತರ ಬೆಳಿಗ್ಗೆ 11.02 ರಿಂದ 11.22ರ ಶುಭ ಮುಹೂರ್ತದಲ್ಲಿ ಆಯುಧಗಳಿಗೆ ರಾಜವಂಶಸ್ಥ ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ ಪೂಜೆ‌ ಸಲ್ಲಿಸಲಿದ್ದಾರೆ.

ಅಕ್ಟೋಬರ್ 15 ರಂದು ಅರಮನೆಯಲ್ಲಿ ವಿಜಯದಶಮಿ ಆಚರಣೆ ಮಾಡಲಾಗುತ್ತದೆ. ಅಂದು ಬೆಳಿಗ್ಗೆ 5.45ಕ್ಕೆ  ಆನೆ ಕುದುರೆ ಹಸುಗಳ ಆಗಮಮಿಸಲಿದ್ದು, 6.13 ರಿಂದ 6.32 ರವರೆಗೆ ಪೂಜಾ ಕೈಂಕರ್ಯ ನೆರವೇರಲಿದೆ. 7.20ರಿಂದ 7.40ರವರೆಗೆ ವಿಜಯದಶಮಿ‌ ಮೆರವಣಿಗೆ ನಡೆಯಲಿದ್ದು, ಅರಮನೆ ಮುಖ್ಯದ್ವಾರದಿಂದ ಅರಮನೆ ಆವರಣ ಭುವನೇಶ್ವರಿ ದೇಗುಲದವರೆಗೂ ಮೆರವಣಿಗೆ ಸಾಗುತ್ತದೆ. ಬಳಿಕ ಯದುವೀರ್ ಅವರು ದೇಗುಲದ ಬನ್ನಿ ಮರಕ್ಕೆ ಪೂಜೆ ಸಲ್ಲಿಸಲಿದ್ದಾರೆ.  ಪೂಜೆಯ ನಂತರ ಮೆರವಣಿಗೆ ಮೂಲಕ ಅರಮನೆಗೆ ವಾಪಸ್ ಆಗಲಿದ್ದಾರೆ.

Key words: mysore dasara- ayudha pooja-Mysore Palace- tomorrow.