ದಸರಾ ಉದ್ಘಾಟನೆಗೆ ಕೊರೊನಾ ವಾರಿಯರ್ಸ್ ಆಯ್ಕೆ ಆಯಾ ಇಲಾಖೆಯ ಮುಖ್ಯಸ್ಥರ ಹೆಗಲಿಗೆ : ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು, ಸೆಪ್ಟೆಂಬರ್, 12,2020(www.justkannada.in) :ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಕೊರೊನಾ ವಾರಿಯರ್ಸ್ ಉದ್ಘಾಟನೆ ಮಾಡಲಿದ್ದು,  ಕೊರೊನಾ ವಾರಿಯರ್ಸ್ ಆಯ್ಕೆಯು ಆಯಾ ಇಲಾಖೆಯ ಮುಖ್ಯಸ್ಥರಿಗೆ ಬಿಟ್ಟಿದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

jk-logo-justkannada-logo

ಶನಿವಾರ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದ್ದು, ಪ್ರತಿವರ್ಷದಂತೆ ಈ ಬಾರಿಯು ವಿದ್ಯುತ್ ದೀಪಾಲಂಕಾರವಿರುತ್ತದೆ. ದಸರಾ ಅಂಗವಾಗಿ 9 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರೀಯ, ಅಂತಾರಾಷ್ಟ್ರೀಯ ಕಲಾವಿದರು ಆಗಮಿಸಲಿದ್ದಾರೆ ಎಂದರು.

ವೀರನಹೊಸಹಳ್ಳಿಯಲ್ಲಿ ಗಜಪಯಣ ಕಾರ್ಯಕ್ರಮವಿರುವುದಿಲ್ಲ. ನೇರವಾಗಿ ಅರಮನೆಗೆ ದಸರಾ ಗಜಪಡೆ ಆಗಮಿಸಲಿವೆ ಎಂದು ತಿಳಿಸಿದ್ದಾರೆ.

key words :Dasara-Inauguration-Corona-Warriors-shoulders-heads-respective-departments-Minister ST Somashekhar