Saturday, September 12, 2026

BDA Apartments

ಬಜೆಟ್ ಮಂಡನೆಗೆ ಡೇಟ್ ಫಿಕ್ಸ್: ಸಚಿವ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಸಚಿವ ಮಾ...
Home Front Page ಬಜೆಟ್ ಮಂಡನೆಗೆ ಡೇಟ್ ಫಿಕ್ಸ್: ಸಚಿವ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಸಚಿವ ಮಾಧುಸ್ವಾಮಿ…

ಬಜೆಟ್ ಮಂಡನೆಗೆ ಡೇಟ್ ಫಿಕ್ಸ್: ಸಚಿವ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಸಚಿವ ಮಾಧುಸ್ವಾಮಿ…

ಬೆಂಗಳೂರು,ಡಿ,30,2019(www.justkannada.in):   ಬಿಎಸ್ ಯಡಿಯೂರಪ್ಪ ನೇತೃತದ ರಾಜ್ಯ ಬಿಜೆಪಿ ಸರ್ಕಾರದ ಬಜೆಟ್  ಮಂಡನೆಗೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 5 ರಂದು ಬಜೆಟ್ ಮಂಡನೆಯಾಗಲಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ  ನಡೆಯಿತು.  ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ, ಫೆಬ್ರವರಿ 17ರಿಂದ 21ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಫೆ.17 ರಂದು ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.

ಮಾರ್ಚ್ 2 ರಿಂದ ಬಜೆಟ್ ಅಧಿವೇಶನ ನಡೆಯಲಿದ್ದು ಜೂನ್ 5 ರಂದು ಬಜೆಟ್  ಮಂಡನೆ ಮಾಡಲಾಗುತ್ತದೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದ್ದಾರೆ.

Key words: Date fix – budget -Minister Madhuswamy – Cabinet meeting.