ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಾಂಕ ಫಿಕ್ಸ್ : ಎರಡು ಹಂತದಲ್ಲಿ ಮತದಾನ.

ನವದೆಹಲಿ,ನವೆಂಬರ್,3,2022(www.justkannada.in): ಗುಜರಾತ್ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

 ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಇಂದು ಸುದ್ಧಿಗೋಷ್ಠಿ ನಡೆಸಿ ಚುನಾವಣಾ ದಿನಾಂಕವನ್ನ ಘೋಷಣೆ ಮಾಡಿದರು.

ಗುಜರಾತ್ ನ 182 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ 1 ರಂದು ಮೊದಲ ಹಂತದಲ್ಲಿ 89 ಕ್ಷೇತ್ರಗಳಿಗೆ  ಮತದಾನ ನಡೆಯಲಿದ್ದು, ಡಿಸೆಂಬರ್ 5 ರಂದು ಎರಡನೇ ಹಂತದಲ್ಲಿ 93 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.  ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಗುಜರಾತ್ ವಿಧಾನಸಭೆಯ ಅವಧಿ ಮುಂದಿನ ವರ್ಷ ಫೆಬ್ರವರಿ 18ಕ್ಕೆ ಕೊನೆಗೊಳ್ಳಲಿದೆ. ವೇಳಾಪಟ್ಟಿಯನ್ನು ಪ್ರಕಟಿಸುವ ಮೊದಲು, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು,  ಮೊರ್ಬಿ ಸೇತುವೆ ಕುಸಿತದ ಸಂತ್ರಸ್ತರಿಗೆ ಸಂತಾಪ ಸೂಚಿಸಿದರು. ನಂತರ ಮಾತನಾಡಿದ  ಅವರು, ಗುಜರಾತ್ ಚುನಾವಣೆಯಲ್ಲಿ 4.9 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾರರಿಗಾಗಿ ಗ್ರಾಮೀಣ ಪ್ರದೇಶಗಳಲ್ಲಿ 34,000 ಕ್ಕಿಂತ ಹೆಚ್ಚು ಸೇರಿದಂತೆ 51,000 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.

Key words: Date Fix – Gujarat -Assembly -Elections

ENGLISH SUMMARY..

Date for Gujarat Assembly elections fixed: Voting in two phases
New Delhi, November 3, 2022 (www.justkannada.in): The Election Commission of India (ECI) has fixed the date for the Gujarat assembly elections. The voting will be held in two phases.
Chief Election Commissioner Rajeev Kumar held a press meet and announced the date today. Accordingly, the assembly elections in Gujarat will be held for 182 assembly constituencies. While voting for 89 constituencies will be held on December 1, the voting for the remaining 93 constituencies will be held on December 5. The results will be announced on December 8.
The term of the Gujarat assembly will conclude on February 18, next year. Before announcing the time of the voting, the Chief Election Commissioner Rajeev Kumar expressed his condolences for those who died in the recent Morbi bridge accident. There are 4.9 crore eligble voters in Gujarat. A total number 51,000 booths, including 34,000 in rural areas will be set up, he informed.
Keywords: Gujarat/ Assembly elections/ Election Commission of India/ Dates announced