ರಾಜ್ಯ ವಿಧಾನಪರಿಷತ್ ಚುನಾವಣೆಗೆ  ಡೇಟ್ ಫಿಕ್ಸ್…

ಬೆಂಗಳೂರು,ಜೂ,9,2020(www.justkannada.in):   ರಾಜ್ಯದ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ. ಜೂನ್ 29ರಂದು ರಾಜ್ಯದ  7 ವಿಧಾನಪರಿಷತ್  ಸ್ಥಾನಗಳಿಗೆ ಮತದಾನ ನಡೆಯಲಿದೆ.Date fix – legislative council- election-karnataka –june 29

ಚುನಾವಣಾ ಆಯೋಗ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸಿದೆ. ಜೂನ್ 11ಕ್ಕೆ ಅಧಿಸೂಚನೆ ಹೊರಬೀಳಲಿದ್ದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಂತರ ಜೂನ್ 18 ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿರಲಿದ್ದು  ಜೂನ್ 19 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಹಾಗೆಯೇ ಜೂನ್ 22 ನಾಮಪತ್ರ ಹಿಂಪಡೆಯಲು ಕಡೇ ದಿನವಾಗಿದೆ.

ಇದಾದ ಬಳಿಕ ಜೂನ್ 29ರಂದು ಮತದಾನ ನಡೆಯಲಿದೆ. ಅಂದು ಸಂಜೆಯೇ ಫಲಿತಾಂಶ ಘೋಷಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಜೀರ್ ಅಹಮದ್, ಜಯಮ್ಮ, ಎಂ.ಸಿ. ವೇಣುಗೋಪಾಲ್, ಎನ್.ಎಸ್. ಬೋಸರಾಜು, ಎಚ್.ಎಂ. ರೇವಣ್ಣ, ಟಿ.ಎ.ಶರವಣ, ಡಿ.ಯು. ಮಲ್ಲಿಕಾರ್ಜುನ ಸೇರಿ ಒಟ್ಟು 7 ಮಂದಿಯ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

Key words: Date fix – legislative council- election-karnataka –june 29