ದಾವಣಗೆರೆ,ಏಪ್ರಿಲ್,8,2026 (www.justkannada.in): ನಾಳೆ ನಡೆಯುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನಕ್ಕೆ ಸಿದ್ದತೆ ನಡೆಸಲಾಗಿದ್ದು, 284 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾ ಚುನಾವಣಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.
ಸಿದ್ದತೆ ಕುರಿತು ಮಾತನಾಡಿ ಮಾಹಿತಿ ನೀಡಿದ ಜಿಲ್ಲಾ ಚುನಾವಣಾಧಿಕಾರಿ ಸಂತೋಷ್ ಕುಮಾರ್, ದಾವಣಗೆ ದಕ್ಷಿಣ ಕ್ಷೇತ್ರದಲ್ಲಿ 284 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಮತಗಟ್ಟೆಗೆ 1489 ಸಿಬ್ಬಂದಿಗಳನ್ನ ನಿಯೋಜನೆ ಮಾಡಲಾಗಿದೆ. 76 ಅತಿಸೂಕ್ಷ್ಮ ಮತಗಟ್ಟೆಗಳಿದ್ದು, ಅತಿಸೂಕ್ಷ್ಮ ಮತಗಟ್ಟೆಗಳಿಗೆ 1 ಸಾವಿರಕ್ಕೂ ಹೆಚ್ಚು ಭಧ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.
ಚುನಾವಣಾ ಕರ್ತವ್ಯಕ್ಕೆ ತೆರಳುವ ಸಿಬ್ಬಂದಿಗೆ ವೈದ್ಯಕೀಯ ಪರೀಕ್ಷೆ ಕಡ್ಡಾಯ
ಚುನಾವಣಾ ಕರ್ತವ್ಯಕ್ಕೆ ತೆರಳುವ ಸಿಬ್ಬಂದಿಗೆ ವೈದ್ಯಕೀಯ ಪರೀಕ್ಷೆ ಕಡ್ಡಾಯವಾಗಿದೆ. ಗಂಭೀರ ಸಮಸ್ಯೆ ಇದ್ದವರಿಗೆ ಚುನಾವಣೆ ಸೇವೆಯಿಂದ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಕೆಲವರು ಅನಾರೋಗ್ಯ ನೆಪ ಹೇಳಿ ಡ್ಯೂಟಿಗೆ ಬರಲ್ಲ. ಅಂತಹ ಸಿಬ್ಬಂದಿಗೆ ವೈದ್ಯಕೀಯ ಪರೀಕ್ಷೆ ಕಡ್ಡಾಯವಾಗಿದೆ. ಚುನಾವಣಾ ಸಿಬ್ಬಂದಿಗಳಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿದ್ದರೆ ತಕ್ಷಣ ಚಿಕಿತ್ಸೆ ನೀಡಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾದವರಾವ್ ತಿಳಿಸಿದರು.
Key words: Preparations, Davangere South, by-election, 284 polling booths







