Sunday, September 20, 2026

BDA Apartments

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯ...
Home Front Page ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ

ದಾವಣಗೆರೆ,ಮೇ,4,2026 (www.justkannada.in): ಬಹಳ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ  ಸಮರ್ಥ್ ಶಾಮನೂರು ಸುಮಾರು 4,900 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಮರ್ಥ್ ಶಾಮನೂರುಗೆ 52,214 ಮತಗಳು ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪಗೆ 45,198 ಮತಗಳು ಲಭಿಸಿವೆ.

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಮುಖಭಂಗವಾಗಿದೆ.  ಗೆಲುವಿನ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

Key words: Davangere South ,by-election, Congress candidate, Samarth Shamanur, wins