ಜಿಲ್ಲಾಧಿಕಾರಿಗಳು ಮಹಾರಾಜರಲ್ಲ: ಡೆಂಗ್ಯೂ ನಿಯಂತ್ರಣಕ್ಕೆ ತನ್ನಿ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು,ಜುಲೈ,8,2024 (www.justkannada.in):  ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು ತಕ್ಷಣವೇ ನಿಯಂತ್ರಣಕ್ಕೆ ತನ್ನಿ. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದರೇ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಸಿಇಒಗಳ ಜೊತೆ ಸಭೆ ನಡೆಸಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಜಿಲ್ಲಾಧಿಕಾರಿಗಳು ಮಹಾರಾಜರಲ್ಲ. ಮಹಾರಾಜರೆಂಬ ಭಾವನೆ ಇದ್ರೆ ಅಭಿವೃದ್ದಿ ಆಗಲ್ಲ. ತಕ್ಷಣ ಡೆಂಗ್ಯೂ ನಿಯಂತ್ರಣಕ್ಕೆ ತನ್ನಿ ಎಂದು ತಾಕೀತು ಮಾಡಿದರು.

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಾಗುತ್ತಿದೆ. ನಿರ್ಲಕ್ಷ್ಯ ಮಾಡಬೇಡಿ ಡೆಂಗ್ಯೂ ತಡೆಗೆ ಸಮರೋಪಾದಿಯಲ್ಲಿ ಕೆಲಸ ಮಾಡಿ ನಿರ್ಲಕ್ಷ್ಯ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು  ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

Key words: DC, dengue, control, CM Siddaramaiah, warns