ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಅಶ್ವಥ್ ನಾರಾಯಣ್ ಗೆ ಅಧಿಕೃತ ಆಹ್ವಾನ…

ಬೆಂಗಳೂರು, ಅಕ್ಟೋಬರ್,12,2020(www.justkannada.in): ಇದೇ ಅಕ್ಟೋಬರ್‌ 17ರಂದು ಆರಂಭವಾಗಲಿರುವ ಜಗತ್ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್‌, ಸೋಮವಾರ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಿದರು.jk-logo-justkannada-logo

ಬೆಳಗ್ಗೆ ಮೈಸೂರು ನಗರದ ಮೇಯರ್‌ ತಸ್ನಿಂ, ಅಧಿಕಾರಿಗಳೊಂದಿಗೆ ಡಿಸಿಎಂ ಅಶ್ವಥ್ ನಾರಾಯಣ್  ನಿವಾಸಕ್ಕೆ ಭೇಟಿ ನೀಡಿದ ಸಚಿವ ಎಸ್ ಟಿ ಸೋಮಶೇಖರ್,  ಉಪ ಮುಖ್ಯಮಂತ್ರಿಗಳಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ ನಾಡಹಬ್ಬದಲ್ಲಿ ಪಾಲ್ಗೊಳ್ಳುವಂತೆ ಆತ್ಮೀಯವಾಗಿ ಸ್ವಾಗತ ಕೋರಿದರು.

ಆಹ್ವಾನ ಪತ್ರಿಕೆಯನ್ನು ಸ್ವೀಕರಿಸಿದ ಡಿಸಿಎಂ ಅಶ್ವಥ್ ನಾರಾಯಣ್,  ಕೋವಿಡ್‌ ಸಂಕಷ್ಟ ಕಾಲದಲ್ಲಿ ನಡೆಯುತ್ತಿರುವ ಈ ವರ್ಷದ ನಾಡಹಬ್ಬವು ಯಾವುದೇ ವಿಘ್ನವಿಲ್ಲದೆ ನಡೆಯಲಿ ಹಾಗೂ ಆ ತಾಯಿ ಚಾಮುಂಡೇಶ್ವರಿ ಕರುಣೆ ಎಲ್ಲರ ಮೇಲೆ ಇರಲಿ ಎಂದು ಶುಭ ಹಾರೈಸಿದರು.dcm-ashwath-narayan-officially-invited-mysore-dasara-inauguration

ಚಾಮುಂಡಿಬೆಟ್ಟದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಾಡಹಬ್ಬಕ್ಕೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.‌ ಮಂಜುನಾಥ್‌ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ ಜೋಷಿ, ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಜತೆಗೆ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಸಿ.ಟಿ.ರವಿ ಮುಂತಾದವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

key words: DCM -Ashwath Narayan -officially -invited – Mysore –Dasara- inauguration.