Saturday, October 24, 2026

Dasara Wishes

Happy Dasara
Home Front Page ಮಾಧ್ಯಮ ಮತ್ತು ಕೇಬಲ್ ಸಿಬ್ಬಂದಿಗೆ ವ್ಯಾಕ್ಸಿನ್ ಅಭಿಯಾನಕ್ಕೆ ಡಿಸಿಎಂ ಅಶ್ವಥ್ ನಾರಾಯಣ್ ಚಾಲನೆ.

ಮಾಧ್ಯಮ ಮತ್ತು ಕೇಬಲ್ ಸಿಬ್ಬಂದಿಗೆ ವ್ಯಾಕ್ಸಿನ್ ಅಭಿಯಾನಕ್ಕೆ ಡಿಸಿಎಂ ಅಶ್ವಥ್ ನಾರಾಯಣ್ ಚಾಲನೆ.

ಬೆಂಗಳೂರು,ಜೂನ್,4,2021(www.justkannada.in):  ಎಲ್ಲ ಬಗೆಯ ಮಾಧ್ಯಮಗಳ ಪ್ರತಿನಿಧಿಗಳು, ಪತ್ರಿಕೆಗಳ ವಿತರಕರು, ಕೇಬಲ್ ಆಪರೇಟರ್ ಗಳು ಸೇರಿ ವಿವಿಧ ವರ್ಗಗಳ ಮುಂಚೂಣಿ ಕಾರ್ಯಕರ್ತರು-ಆದ್ಯತಾ ಗುಂಪಿನ ಜನರಿಗೆ ವ್ಯಾಕ್ಸಿನ್ ನೀಡುವ ಅಭಿಯಾನಕ್ಕೆ ರಾಜ್ಯ ಕೋವಿಡ್  ಕಾರ್ಯಪಡೆ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಚಾಲನೆ ನೀಡಿದರು.jk

ನಗರದ ಮಲ್ಲೇಶ್ವರ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಈ ಲಸಿಕೆ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿದ ನಂತರ  ಡಿಸಿಎಂ ಅಶ್ವಥ್ ನಾರಾಯಣ್, ಮಾಧ್ಯಮಗಳ ಜತೆ ಮಾತನಾಡಿದರು.

ಈಗಾಗಲೇ ಫ್ರಂಟ್ ಲೈನ್ ಕಾರ್ಯಕರ್ತರಿಗೆ ಅದರಲ್ಲೂ ಮುಖ್ಯವಾಗಿ ಟೆಲಿಕಾಂ, ಇಂಟರ್ನೆಟ್ ಸಂಪರ್ಕ ಕಲ್ಪಿಸುವ ಸಿಬ್ಬಂದಿಯ ಜತೆಗೆ, ಪತ್ರಿಕೆ & ವಿದ್ಯುನ್ಮಾನ ಮಾಧ್ಯಮಗಳ ಸಿಬ್ಬಂದಿಗೆ ಕೇಂದ್ರದ ಮಾರ್ಗಸೂಚಿಯಂತೆ ಈ ಲಸಿಕೆ ಕೊಡಲಾಗುತ್ತಿದೆ ಎಂದರು.

ಇವರೆಲ್ಲರೂ ಜನರ ಸಂಪರ್ಕದಲ್ಲಿ ಹೆಚ್ಚು ಇರುತ್ತಾರೆ. ಹೀಗಾಗಿ ಇವರಿಗೆ ಸೋಂಕಿನ ಅಪಾಯ ಹೆಚ್ಚು. ಆದ್ದರಿಂದ ಆದ್ಯತೆಯ ಮೇಲೆ ಇವರೆಲ್ಲರಿಗೂ ಲಸಿಕೆ ಕೊಡಲಾಗುತ್ತಿದೆ. ರಾಜ್ಯಾದ್ಯಂತ ಈ ಗುಂಪಿಗೆ ಲಸಿಕಾ ಅಭಿಯಾನ ಉತ್ತಮವಾಗಿ ನಡೆಯುತ್ತಿದೆ ಎಂದರು.

ಶಾಸಕ ರವಿಕುಮಾರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವನಾಂದ ತಗಡೂರು, ಕೇಬಲ್ ಆಪರೇಟರ್ಸ್ ಸಂಘದ ರಾಮ ಪ್ರಸಾದ್  ಮುಂತಾದವರು ಈ ಸಂದರ್ಭದಲ್ಲಿ ಇದ್ದರು.

Key words: DCM -Ashwath Narayan- vaccine -campaign – media -cable staff