ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಡಿಸಿಎಂ ಅಶ್ವಥ್ ನಾರಾಯಣ್….

ಮೈಸೂರು,ಸೆ,20,2019(www.justkannada.in): ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್  ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದರು.

ಉಪ ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಸಾಂಸ್ಕೃತಿಕ ನಗರ ಮೈಸೂರಿಗೆ  ಆಗಮಿಸಿದ ಅಶ್ವಥ್ ನಾರಾಯಣ್ ಅವರಿಗೆ ಕಾರ್ಯಕರ್ತರು ಡೋಲು ನಗಾರಿ ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಿದರು. ಬಳಿಕ ಡಿಸಿಎಂ ಅಶ್ವಥ್ ನಾರಾಯಣ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ಅಶ್ವಥ್ ನಾರಾಯಣ್ ಗೆ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಪೂರ್ಣಕುಂಭ ಸ್ವಾಗತ ನೀಡಿದರು.

ಪಕ್ಷದ ಕಾರ್ಯಕರ್ತರೊಂದಿಗೆ ಅಶ್ವಥ್ ನಾರಾಯಣ್  ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದರು. ಡಾ. ಅಶ್ವಥ್ ನಾರಾಯಣ್ ಗೆ ಶಾಸಕ ಎಲ್. ನಾಗೇಂದ್ರ ಹಾಗೂ ಸ್ಥಳೀಯ ನಾಯಕರು ಸಾಥ್ ನೀಡಿದರು.  ಅಶ್ವಥ್ ನಾರಾಯಣ್  ಇಂದು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

Key words: DCM -Ashwath Narayan- visits- Chamundi Hill – Mysore