ಮುಂದಿನ 10 ವರ್ಷಗಳಲ್ಲಿ ಬೆಂಗಳೂರಿಗೆ ನನ್ನ ಕೊಡುಗೆ ಎಲ್ಲರಿಗೂ ಅರ್ಥವಾಗುತ್ತೆ- ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಅಕ್ಟೋಬರ್,10,2025 (www.justkannada.in):  ಬೆಂಗಳೂರಿಗೆ ನನ್ನ ಕೊಡುಗೆ ಏನೆಂಬುದು ಮುಂದಿನ 10 ವರ್ಷಗಳಲ್ಲಿ ಎಲ್ಲರಿಗೂ ಅರ್ಥವಾಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನುಡಿದರು.

ವಿದ್ಯಾರ್ಥಿಗಳ ಜೊತೆ ಸಂವಾದದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ‘ನನ್ನ ಅಧಿಕಾರಾವಧಿಯಲ್ಲಿ ಬೆಂಗಳೂರಿಗೆ ಏನಾದರೂ ಕೊಡುಗೆ ನೀಡಬೇಕು ಎಂದು ಪಣತೊಟ್ಟಿದ್ದೇನೆ. ಹೀಗಾಗಿ ಮುಂದಿನ 10 ವರ್ಷಗಳಲ್ಲಿ ಬೆಂಗಳೂರಿಗೆ ನನ್ನ ಕೊಡುಗೆ ಏನೆಂಬುದು ಗೊತ್ತಗುತ್ತದೆ ಎಂದರು.

ಟೀಕೆಗಳಿಗೆ ರಾಜಕಾರಣಿಗಳು ಹೆದರಬಾರದು. ಜನರ ಧ್ವನಿಯನ್ನು ಆಲಿಸಬೇಕು. ಇಡೀ ದೇಶದಲ್ಲೇ ಮೊದಲು ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಕರೆಮಾಡಿ ರಸ್ತೆ ಗುಂಡಿ, ಕಸದ ಬಗ್ಗೆ ಮಾಹಿತಿ ನೀಡುವ ಅವಕಾಶ ಕಲ್ಪಿಸಿಕೊಡಲಾಗಿದೆ, ಎಂದು  ಡಿಕೆ ಶಿವಕುಮಾರ್ ಹೇಳಿದರು.

Key words: my contribution, Bengaluru, next 10 years , DCM D.K. Shivakumar