ಶಿವಮೊಗ್ಗ,ಜನವರಿ,30,2026 (www.justkannada.in): ‘ಮನರೇಗಾ ಯೋಜನೆ ಹೆಸರು ಬದಲಿಸಿರುವ ಕೇಂದ್ರ ಸರ್ಕಾರದ ನಡೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು ಈ ಮಧ್ಯೆ ರಾಜ್ಯ ಸರ್ಕಾರ ಈ ಕುರಿತು ಜಾಹೀರಾತು ನೀಡಿದ್ದು ಇದನ್ನ ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. 
ಕಾಯ್ದೆ ಹಿಂಪಡೆದು ಹೊಸ ಯೋಜನೆ ಜಾರಿಗೊಳಿಸಿ ಕೇಂದ್ರ ಸರ್ಕಾರ ಗ್ರಾಮೀಣರಿಗೆ ಯಾವ ರೀತಿ ಅನ್ಯಾಯ ಮಾಡಿದೆ ಎಂಬುದನ್ನು ಜಾಹೀರಾತು ಮೂಲಕ ನಮ್ಮದೇ ಶೈಲಿಯಲ್ಲಿ ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅದರಲ್ಲಿ ತಪ್ಪೇನಿದೆ’ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ‘ದೆಹಲಿಯಲ್ಲಿ ನಡೆದ ರೈತರ ಹೋರಾಟದ ಮಾದರಿಯಲ್ಲೇ ಮನರೇಗಾ ಯೋಜನೆ ಮರು ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ದೇಶದಾದ್ಯಂತ ಕೇಂದ್ರದ ವಿರುದ್ಧ ಹೋರಾಟ ಮಾಡಲಿದೆ ಕೇಂದ್ರದ ನಿರ್ಧಾರದಿಂದ ಗ್ರಾಮ ಪಂಚಾಯಿತಿ ಸದಸ್ಯರ ಹಕ್ಕು ಕಿತ್ತುಕೊಂಡಂತಾಗಿದೆ. ಇದನ್ನೇ ಜಾಹೀರಾತಿನಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ತಿಳಿಸಿದರು.
Key words: re-implementation, MNREGA scheme. DCM. D.K. Shivakumar







